ಫೆ.12ರಂದು ಜೆಸಿಟಿಯು ಕರೆ ನೀಡಿರುವ ರಾಷ್ಟ್ರೀಯ ಮುಷ್ಕರದ ಅಂಗವಾಗಿ ನಗರದ ಎಪಿಎಂಸಿ ರೈತ ಭವನದಲ್ಲಿ ಎಐಸಿಸಿಟಿಯು ಹಾಗೂ ಆಯರ್ಲಾ ರಾಯಚೂರು ಜಿಲ್ಲಾಮಟ್ಟದ ಸಮಾವೇಶ ಫೆ.7ರಂದು ಹಮ್ಮಿಕೊಳ್ಳಲಾಗಿದ್ದು, ಸಂಘಟನೆಯ ಮುಖಂಡರು ಪ್ರವಾಸಿ ಮಂದಿರದ ಆವರಣದಲ್ಲಿ ಬುಧವಾರ ಪೋಸ್ಟರ್ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ್ ಪೂಜಾರ್, ಕೇಂದ್ರ ಸರ್ಕಾರವು ಕಾರ್ಮಿಕರಿಗೆ ಮಾರಕವಾಗಿರುವ 4 ಕಾರ್ಮಿಕ ಸಂಹಿತೆಗಳು ಜಾರಿಗೆ ತಂದಿದೆ. ಅಷ್ಟೇ ಅಲ್ಲದೇ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಬದಲಿಸಿ ವಿಬಿ-ಗ್ರಾಮಜೀ 2025 ಮಸೂದೆಯನ್ನು ಜಾರಿಗೊಳಿಸುವ ಮೂಲಕ ಜನಸಾಮಾನ್ಯರ ಶಾಸನಬದ್ಧ ಉದ್ಯೋಗದ ಹಕ್ಕನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ. ಈ ಹಿನ್ನೆಲೆಯಲ್ಲಿ ಜೆಸಿಟಿಯು ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಮುಷ್ಕರದಲ್ಲಿ ದುಡಿಯುವ ಜನತೆ ಭಾಗವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ: ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷ ಅಜೀಜ್ ಜಾಗೀದಾರ, ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಆಯರ್ಲಾ ಸಂಚಾಲಕ ಆರ್. ಎಚ್ ಕಲಮಂಗಿ, ಭಗತ್ ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ, ಹುಸೇನಪ್ಪ ಅರಹಳ್ಳಿ, ಕಂಟೆಪ್ಪ, ವಿರೇಶ ನಾಯಕ್, ಮೌನೇಶ ಕವಿತಾಳ, ಮಹಾದೇವ ಅಮರಾಪುರ, ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *