ಸಿಂಧನೂರು ನಗರದ ಮಹಿಬೂಬ್ ಕಾಲೋನಿಯ ಬಾಡಿಗೆ ಮನೆಯಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಏಳುರಾಗಿ ಕ್ಯಾಂಪ್ ನಿವಾಸಿ ದೂದ್ ಪಾಷಾ(25) ಮೃತ ಯುವಕನಾಗಿದ್ದು, ಇತ್ತೀಚೆಗೆ ಸಿಂಧನೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆಯ ಮಾಹಿತಿಯು ತಿಳಿಯುತ್ತಿದ್ದಂತೆ ಸಿಂಧನೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಪೊಲೀಸರು ಮೃತನ ವಾಸ ಸ್ಥಳವನ್ನು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಸಿಪಿಐ ಹಾಗೂ ಡಿವೈಎಸ್ಪಿ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆಗೆ ಮಾರ್ಗದರ್ಶನ ನೀಡಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಲು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

