ರಾಯಚೂರು ಫೆಬ್ರವರಿ 04 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಉತ್ಸವದ ಕಾರ್ಯಕ್ರಮ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆ.6ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಂಗ್ರಾಣಿ ಕಲ್ಲು, ಉಸುಕಿನ ಮೂಟೆ ಎತ್ತುವುದು ಹಾಗೂ ಕುಸ್ತಿ ಕ್ರೀಡೆಗಳ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಭಾಗವಹಿಸುವ ಆಸಕ್ತ ಕ್ರೀಡಾಪಟುಗಳು ಸಂಘಟಿಕರಾದ ಮಹಾದೇವ ಮೊಬೈಲ್ ಸಂಖ್ಯೆ: 9900188545, ಅಮಿತ್ ಸಿ.ಜೆ.: 6360828618, ಹನುಮಂತ: 7090307353 ಇವರನ್ನು ಸಂಪರ್ಕಿಸಿ ಬೆಳಿಗ್ಗೆ 9 ಗಂಟೆಯೊಳಗೆ ಸಂಘಟಿಕರಿಗೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *