ರಾಯಚೂರು ಫೆಬ್ರವರಿ 04 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.05, 06, ಹಾಗೂ 07ರಂದು ನಡೆಯಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತಮ್ಮ ಕುಟುಂಬದ ಸಮೇತ ಭಾಗವಹಿಸಲು ಅನುಕೂಲ ಮಾಡಿಕೊಡಬೇಕೆಂದು ಕಾರ್ಮಿಕ ಸಂಘಟನೆಗಳು/ ಕಾರ್ಮಿಕರು ಜಿಲ್ಲಾಡಳಿತವನ್ನು ಮತ್ತು ಕಾರ್ಮಿಕ ಇಲಾಖೆಯನ್ನು ಕೋರಿಕೊಂಡ ಹಿನ್ನಲೆಯಲ್ಲಿ ಉತ್ಸವದ ದಿನಾಂಕಗಳಂದು ಕಾರ್ಮಿಕರಿಗೆ ಬೆಳಿಗ್ಗೆ 01 ಗಂಟೆ ಮುಂಚಿತವಾಗಿ ಹಾಗೂ ಸಂಜೆ 01 ಗಂಟೆ ಕಾಲ ಮುಂಚಿತವಾಗಿ ಕೆಲಸದಿಂದ ತೆರಳಲು ಅವಕಾಶ ಮಾಡಿಕೊಡುವ ಮೂಲಕ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.
ಸ್ವಯಂ ಪ್ರೇರಣೆಯಿಂದ ಉಚಿತವಾಗಿ 01 ಗಂಟೆ ಕಾಲ ಈ ಉತ್ಸವವನ್ನು ಸಂದರ್ಶಿಸಲು ಮಾಲೀಕರು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
