ರಾಯಚೂರು ಫೆಬ್ರವರಿ 04 (ಕರ್ನಾಟಕ ವಾರ್ತೆ): ಇಲ್ಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ರಾಯಚೂರು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸಿದ ಪರಿಶಿಷ್ಟ ಜಾತಿ ಮಹಿಳಾ ಅಭ್ಯರ್ಥಿಗಳಿಗೆ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಯಚೂರಿನಲ್ಲಿ 2026ರ ಫೆಬ್ರವರಿ 2ನೇ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತ ಪರಿಶಿಷ್ಟ ಜಾತಿ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ತರಬೇತಿಯಲ್ಲಿಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಉದ್ಯಮಶೀಲತೆಯ ಗುಣಲಕ್ಷಣಗಳು, ಸ್ವಂತ ಉದ್ಯೋಗ ಸ್ಥಾಪಿಸಲು ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಮತ್ತು ಸಾಲ ಸೌಲಭ್ಯಗಳ ಮಾಹಿತಿ ಹಾಗೂ ಸ್ವಯಂ ಉದ್ಯಮಗಳನ್ನು ಸ್ಥಾಪಿಸಲು ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು. 8ನೇ ತರಗತಿ ಯಿಂದ ಎಸ್.ಎಸ್.ಎಲ್.ಸಿ ವರಗೆ ಶಿಕ್ಷಣ ಪಡೆದಿಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವವರು ದಿನಾಂಕ: 08-02-2026 ರೊಳಗಾಗಿ ಮೊಬೈಲ್ ಸಂಖ್ಯೆ: 9986600631, 9986332736ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಅಥವಾ ಜಂಟಿ ನಿರ್ದೇಶಕರು, ಸಿಡಾಕ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ನವೀನ ಆಸ್ಪತ್ರೆ ಪಕ್ಕದಲ್ಲಿ ರಾಯಚೂರು ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *