ನೈಜ್ಯ ದೆಸೆ :
ಲಿಂಗಸಗೂರು : ಫೆ 5 .
ಜನವರಿ 26ರಂದು ಆಯೋಜಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನಿರಿಸದೆ ಧ್ವಜಾರೋಹಣ ಮಾಡಿರುವ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ವಾಸವಿ ಕಲ್ಯಾಣ ಮಂಟಪದ ಹತ್ತಿರ ಆರ್ಯ ವೈಶ್ಯ ಸಮಾಜದ ಪದಾಧಿಕಾರಿಗಳ ನಡೆ ಖಂಡನೀಯವಾಗಿದೆ ಎಂದು ಆರೋಪಿಸಿ ದಲಿತ ಸೇನೆಯ ತಾಲೂಕ ಅಧ್ಯಕ್ಷ ಬಸವರಾಜ್ ಗೋಸ್ಲಿ ಸಹಾಯಕ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿದರು .
ಗಣರಾಜ್ಯೋತ್ಸವವು ಸಂವಿಧಾನದ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಸ್ಮರಿಸುವ ರಾಷ್ಟ್ರೀಯ ಹಬ್ಬವಾಗಿದೆ. ಇಂತಹ ಸಂದರ್ಭಗಳಲ್ಲಿ ಸಂವಿಧಾನದ ಪಿತಾಮಹರ ಭಾವಚಿತ್ರವನ್ನಿಡಬೇಕೆಂದು ಸರ್ಕಾರ ಆದೇಶವನ್ನು ಹೊರಡಿಸಿದೆ. ಆದರೆ ಆರ್ಯ ವೈಶ್ಯ ಸಮಾಜದ ಪದಾಧಿಕಾರಿಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರ ಭಾವಚಿತ್ರವನ್ನಿಡದೇ ಅವರಿಗೆ ಅವಮಾನ ಮಾಡಿದ್ದಾರೆ. ಸದರಿ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಸರ್ಕಾರದ ನಿಯಮ ಉಲ್ಲಂಘಸಿರುವ ಆರ್ಯವೈಶ್ಯ ಸಮಾಜದ ಪದಾಧಿಕಾರಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಜೊತೆಗೆ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲೆಯ ಎಲ್ಲಾ ಸಂಘಟನೆಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು ಸಂವಿಧಾನದ ಗೌರವ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳ ಬೇಕೆಂದು ಹೇಳಿದರು . ಈ ಸಂದರ್ಭದಲ್ಲಿ ಗಣೇಶ್ ದೇವರ ಭೂಪುರ , ಶಿವಪ್ಪ ಯಲಗಟ್ಟ ಇದ್ದರು .

