ಮಾನ್ವಿ: ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣ ತಾಲೂಕು ಘಟಕದಿಂದ ಹಮ್ಮಿಕೊಂಡ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕರವೇ.ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್ ಮಾತನಾಡಿ ಜಿಲ್ಲೆಯಲ್ಲಿ ಕರವೇ ವತಿಯಿಂದ ನಿರಂತರವಾಗಿ ಸರ್ಕಾರಿ ಶಾಲೆಗಳ ಅಭಿವೃದ್ದಿಗಾಗಿ ಅಗತ್ಯವಿರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಕೂಡ ವಿತರಿಸಲಾಗುತ್ತಿದೆ. ವಿವಿಧ ಸ್ಪರ್ಧೇಗಳನ್ನು ಅಯೋಜಿಸುವ ಮೂಲಕ ಮಕ್ಕಳಿಗೆ ಪ್ರೋತ್ಸಾಹವನ್ನು ನೀಡುತ್ತ ಬಂದಿದೇವೆ. ಕಲ್ಯಾಣ ಕರ್ನಾಟಕದ ಅತ್ಯಂತ ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರು ಜಿಲ್ಲೆಯ ಜನರಿಗೆ ಉತ್ತಮವಾದ ಆರೋಗ್ಯಕ್ಕಾಗಿ ಏಮ್ಸ್ ವೈದ್ಯಾಕೀಯ ಸಂಸ್ಥೆಯನ್ನು ಸ್ಥಾಪಿಸುವಂತೆ 1300 ದಿನಗಳಿಂದ ಸುಧಿರ್ಘವಾಗಿ ಜಿಲ್ಲೆಯ ಸಂಘ ಸಂಸ್ಥೆಗಳು ಹೋರಾಟ ನಡೆಸುತ್ತ ಬಂದಿದೇವೆ ಹಾಗೂ ರಾಜ್ಯ ಸರ್ಕಾರ ಕೂಡ ಕೇಂದ್ರಕ್ಕೆ ಈ ಕುರಿತು ನಾಲ್ಕು ಬಾರಿ ಪತ್ರ ಬರೆದಿದ್ದರು ಕೂಡ ಕೇಂದ್ರ ಸರ್ಕಾರ ಸ್ಪಂದಿಸದೆ ಇರುವುದರಿಂದ ಜಿಲ್ಲೆಗೆ ಆಗಮಿಸು ಕೇಂದ್ರ ಸಚಿವರ ವಿರುದ್ದ ಜಿಲ್ಲೆಯ ಎಲ್ಲಾ ಕನ್ನಡ ಪರ ಸಂಘಟನೆಗಳೊAದಿಗೆ ತೀವ್ರವಾದ ಪ್ರತಿಭಟನೆಯನ್ನು ನಡೆಸಲಾಗುವುದು.ಎಂದು ತಿಳಿಸಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ.ಚನ್ನಬಸವ ರವರು ಉಪನ್ಯಾಸ ನೀಡಿ ಕಾವೇರಿಯಿಂದ ಗೋದಾವರಿಯವರೆಗೂ ಹರಡಿರುವ ಭವ್ಯವಾದ ಕನ್ನಡನಾಡಿದ್ದು ನಮ್ಮ ಕನ್ನಡ ನಾಡನ್ನು ಅನೇಕ ಪ್ರಸಿದ್ದ ರಾಜ ಮಹಾರಾಜರು ಆಳ್ವಿಕೆ ಮಾಡಿ ಪ್ರಸಿದ್ದಿಯನ್ನು ಪಡೆದಿದ್ದಾರೆ ಇಂತಹ ಭವ್ಯ ಇತಿಹಾಸವನ್ನು ನಾವು ನಮ್ಮ ಮಕ್ಕಳಿಗೆ ತಿಳಿಸಬೇಕಾಗಿದೆ. ಕನ್ನಡ ನಮಗೆ ನಿತ್ಯ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು ಹಾಗೂ ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ರಾಯಚೂರಿನ ಜೂನಿಯರ್ ವಿಷ್ಣು ವರ್ಧನ್ ಖ್ಯಾತಿಯ ವಿಷ್ಣು ನಾರಾಯಣಸ್ವಾಮಿ ವಿವಿಧ ಹಾಡುಗಳಿಗೆ ನೃತ್ಯ ಪ್ರದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ಬಸವರಾಜ ಸುಂಕೇಶ್ವರ ಉಪನ್ಯಾಸಕರು, ಕರವೇ ರಾಜ್ಯ ಉಪಾಧ್ಯಕ್ಷರಾದ ಹರೀಷ್ ಸಿಂಗ್, ಡಾ.ಪವನ್ ಕುಮಾರ ದಾನಿ, ಡಾ.ದೇವರಾಜ ವರ್ಮ,ಕ್ರಾಂತಿ ಯಾದವ್.ತಾ.ಪಂ. ವ್ಯವಸ್ಥಪಕರಾದ ಬಸವರಾಜ, ಸುಭಾನ್ ಬೇಗ್,ಚೇತನ ಸಿಂಗ್ ವಕೀಲರು, ಚಂದ್ರಕಾಲ ವಕೀಲರು, ಕರವೇ ತಾ.ಅಧ್ಯಕ್ಷರಾದ ನರಸಿಂಹ, ಗೌ.ಅಧ್ಯಕ್ಷರಾದ ಯಲ್ಲಪ್ಪ ನಿಲಾಗಲ್, ದೀಪಕ್ ಯಾದವ್ ಸೇರಿದಂತೆ ಇನ್ನಿತರರು ಇದ್ದರು.
23-ಮಾನ್ವಿ-2:
ಮಾನ್ವಿ: ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣ ತಾಲೂಕು ಘಟಕದಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

