ತಾಳಿಕೋಟಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಹಂಡೇ ವಜೀರ ಸಮಾಜದ ತಾಲೂಕ ಘಟಕದ ವತಿಯಿಂದ ಹಮ್ಮಿಕೊಂಡ 2026 ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಟ್ಟಣದ ಪ್ರತಿಷ್ಠಿತ ಎಸ್ ಎಸ್ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್.ಪಾಟೀಲ ಇವರನ್ನು ಶಿಕ್ಷಣ ಕ್ಷೇತ್ರದ ಸೇವೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.ಪೂಜ್ಯರಾದ ಜಯಗುರು ಸಿದ್ದೇಶ್ವರ ಮಹಾಸ್ವಾಮಿಗಳು, ಗುರುಮಡಿವಾಳೇಶ್ವರ ಶಿವಾಚಾರ್ಯರು, ಶಿವಕುಮಾರ ಶ್ರೀಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಶಿಕ್ಷಕ ಎ.ಡಿ.ಗೋನಾಳ,ಮುತ್ತು ಬಿರಾದಾರ (ಚಬನೂರ), ಹ.ವ.ಸ.ತಾಳಿಕೋಟಿ ಘಟಕದ ಅಧ್ಯಕ್ಷ ರಾಮನಗೌಡ ಬಿರಾದಾರ ಹಾಗೂ ಗಣ್ಯಮಾನ್ಯರು ಇದ್ದರು.

