ರಾಯಚೂರು ಫೆಬ್ರವರಿ 05 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 07ರಂದು ಮಧ್ಯಾಹ್ನ 4ರಿಂದ 5ರವರೆಗೆ ನಗರದ ಜಿಲ್ಲಾ ಕಾರಾಗೃಹ ಹತ್ತಿರದ ಮಹಿಳಾ ಸಮಾಜ ಆವರಣದಲ್ಲಿ ಸಂವಾದ ಗೋಷ್ಠಿ ನಡೆಯಲಿದೆ.
ಸಾಮಾಜಿಕ ಚಿಂತಕರು ಹಾಗೂ ಹೋರಾಟಗಾರರಾದ ಡಾ.ಬಸವರಾಜ ಕಳಸ ಅವರು ಕಾರ್ಯಕ್ರಮ ಆಶಯ ನುಡಿ ಹೇಳಲಿದ್ದಾರೆ.
ಕಲಬುರಗಿ ವಿಭಾಗದ ಕರ್ನಾಟಕ ಮಾಹಿತಿ ಆಯೋಗ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟಸಿಂಗ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಹಿರಿಯ ಸಾಹಿತಿಗಳು ಮತ್ತು ಚಿಂತಕರಾದ ರಾಘವೇಂದ್ರ ಕುಷ್ಟಗಿ ಅವರು ಅಧ್ಯಕ್ಷತೆವಹಿಸುವರು.
ಮುಖ್ಯ ಅತಿಥಿಗಳಾಗಿ ಕೃಷಿ ವಿವಿಯ ಕುಲಪತಿ ಡಾ.ಹನುಮಂತಪ್ಪ ಎಂ., ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ರಾಯಚೂರು ಸಹಾಯಕ ಆಯುಕ್ತರರಾದ ಡಾ.ಹಂಪಣ್ಣ ಸಜ್ಜನ್, ಸಾಹಿತಿಗಳಾದ ವೀರ ಹನುಮಾನ, ಅವರು ಪಾಲ್ಗೊಳ್ಳುವರು.
ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ ಅವರು ಕಾರ್ಯಕ್ರಮದ ನಿರೂಪಣೆ, ಶಿಕ್ಷಣ ಇಲಾಖೆಯ ಸಿಆರ್‌ಪಿ ರಾವುತ್ ರಾವ್ ಬರೂರ ಅವರು ಸ್ವಾಗತ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಸದಾಶಿವಪ್ಪ ಅವರು ವಂದನಾರ್ಪಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *