ಮಾನ್ವಿ : ಸ.ಹಿ.ಪ್ರಾ.ಶಾಲೆಯ ನಸಲಾಪುರ ಗ್ರಾಮದ ಕು.ಅಕ್ಷತಾ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾಳೆ.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ರಾಯಚೂರು ಉಪನಿರ್ದೇಶಕರ ಕಾರ್ಯಾಲಯ, ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಯಚೂರು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2025-26
ಕುಮಾರಿ ಅಕ್ಷತಾ ತಂದೆ ನಾಗರಾಜ ಇವರು ದಿನಾಂಕ 04-02-2028 ರಂದು “ರಾಯಚೂರು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಕಲೋತ್ಸವ 2025-26 ರ ಕಂಠ ಪಾಠ ಕನ್ನಡ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣಪ್ಪ, ಸಹಶಿಕ್ಷಕರಾದ ಲಕ್ಷ್ಮಣ ನಾಯ್ಕ್, ಅಶ್ವಿನಿ, ಅಥಿತಿ ಶಿಕ್ಷಕಿಯರಾದ ನಿರ್ಮಲಾ, ರಾಧಾ, ಬನಶಂಕರಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣಯ್ಯ ನಾಯಕ ಪದಾಧಿಕಾರಿಗಳು, ಊರಿನ ಗ್ರಾಮಸ್ಥರು ಅಭಿನಂದಿಸಿ ಗೌರವಿಸಿದ್ದಾರೆ.

Leave a Reply

Your email address will not be published. Required fields are marked *