ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಫೆ.10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಕಾಯಕ ಶರಣರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯ ಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಭಾಗವಹಿಸುವರು.
ಸಾಹಿತಿ ಎನ್.ಡಿ.ವೆಂಕಮ್ಮ ಹಾಗೂ ಸುಶೀಲಾ ಶಿರೂರ್ ಡಿ.ಎನ್ ಅವರು ಕಾಯಕ ಶರಣರ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಕಂಪ್ಲಿ ತಾಲ್ಲೂಕಿನ ಎಂ.ರಾಜು ಎಮ್ಮಿಗನೂರು ತಂಡದಿAದ ವಚನ ಸಂಗೀತ ಕಾರ್ಯಕ್ರಮ ಇರಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ.

