ಮಸ್ಕಿ: ಪಟ್ಟಣದಲ್ಲಿರುವ ದೇವಾನಾಂ ಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ಇದೇ ತಿಂಗಳ ಫೆಬ್ರವರಿ 10 ರಂದು ನಮ್ಮ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹಾಂತಗೌಡ ಪಾಟೀಲ್ ತಿಳಿಸಿದರು.
ಈ ರಸಪ್ರಶ್ನೆ ಸ್ಪರ್ಧೆಯು ಮಸ್ಕಿ ತಾಲೂಕಿನ ಎಲ್ಲಾ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು.
ಸ್ಪರ್ಧೆಯಲ್ಲಿ ದ್ವಿತೀಯ ವರ್ಷದ ಪಿಯುಸಿ ಪಠ್ಯಕ್ರಮಕ್ಕೆ ಸಂಬಂಧಿಸಿದ ಪ್ರಶ್ನೆಗಳು ಕೇಳಲಾಗುತ್ತವೆ.ಆರಂಭಿಕ ಹಂತದಲ್ಲಿ ಪ್ರತಿ ಕಾಲೇಜಿನಿಂದ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆಯ ಮೂಲಕ ಸ್ಪರ್ಧೆಯನ್ನು ಆಯೋಜಿಸಲಾಗುವುದು. ಹೆಚ್ಚು ಅಂಕ ಗಳಿಸಿದ ತಂಡಗಳಿಗೆ ನಗದು ಬಹುಮಾನಗಳನ್ನು ಪ್ರಧಾನ ಮಾಡಲಾಗುವುದು.
ತಾಲೂಕಿನ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ವಿದ್ಯಾರ್ಥಿಗಳನ್ನು ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಮನವಿ ಮಾಡಿದರು.

