ಮಾನ್ವಿ : ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಗೊರ್ಕಲ್ ಗ್ರಾಮದಲ್ಲಿ ಪಂಚಾಯತ್ ಎದುರು ಕೊಡಗಳನ್ನು ಹಿಟ್ಟು ವೃದ್ಧ ಮಹಿಳೆಯರು ಹಿರಿಯರು ಹಾಗೂ ಸಣ್ಣ ಸಣ್ಣ ಮಕ್ಕಳು ನೀರಿಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.ಫೆಬ್ರವರಿ 10 ರಂದು ದ್ಯಾವಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಲಿದೆ. ಆದ್ದರಿಂದ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ನೀರು ಬರುತ್ತಿಲ್ಲ ಎಂದು ಊರಿನ ಗ್ರಾಮಸ್ಥರು ಬಿಂದಿಗೆ ಹಿಡಿದು ಗ್ರಾಮ ಪಂಚಾಯತಿಗೆ ಬೀಗ ಹಾಕಿ ಮಹಿಳೆಯರು ಹಾಗೂ ಬಸವರಾಜ್ ನಾಯಕ ಗೊರ್ಕಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅತೀ ಶೀಘ್ರದಲ್ಲಿ ನೀರು ಬಿಡಬೇಕು. ಒಂದು ವೇಳೆ ನೀರು ಬಿಡದಿದ್ದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾದ ಅಕ್ತಾರ್ ಪಾಷಾ ವಿರುದ್ಧ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *