ರಾಯಚೂರು ಫೆಬ್ರವರಿ 06 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-01ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಫೆಬ್ರವರಿ 09ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ವಿದ್ಯುತ್ ದೂರುಗಳ ಬಗ್ಗೆ ಸಭೆಗೆ ಹಾಜರಾಗಿ ದೂರಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-01ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
