ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದ ಶ್ರೀ ರೇಣುಕ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಜಾತ್ರ ಮಹೋತ್ಸವ ಅಂಗವಾಗಿ ವಿಶೇಷ ಪೂಜೆ ನಡೆಯಿತು ಬೆಳಿಗಿನಿಂದ ಜಿಲ್ಲೆ ಸೇರಿದಂತೆ ವಿವಿಧ ರಾಜ್ಯಗಳ ಸಾವಿರಾರು ಭಕ್ತರು ಆಗಮಿಸಿ ಶ್ರೀ ರೇಣುಕ ಯಲ್ಲಮ್ಮ ದೇವಿಗೆ ಪೂಜೆ ಸಲ್ಲಿಸಿದರು. ಸುತ್ತಮುತ್ತಲಿನ ಗ್ರಾಮದ ಭಕ್ತರು ತಮ್ಮ ಹರಕೆಯನ್ನು ತಿರಿಸಿ ಪೂಜೆ ಸಲ್ಲಿಸಿದರು. ಸಂಜೆ ದೇವಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ಗುಡಿಯ ಸುತ್ತ ಪ್ರದಕ್ಷಣೆ ಹಾಕಿ ರಥದಲ್ಲಿ ಕೂಡಿಸಿ ಸಾವಿರಾರು ಭಕ್ತರ ಸಮುಖದಲ್ಲಿ ಶ್ರೀ ರೇಣುಕ ಯಲ್ಲಮ್ಮ ದೇವಿಯ ರಥೋತ್ಸವ ನೆರವೇರಿತು.
ದೇವಸ್ಥಾನದ ಆಡಳಿತಾಧಿಕಾರಿ ತಹಶೀಲ್ದಾರ್ ಭೀಮರಾಯ ಬಿ.ರಾಮಸಮುದ್ರ. ಸೇರಿದಂತೆ ಮಾಜಿ ಶಾಸಕರು ಹಾಗೂ ಗ್ರಾಮದ ಮುಖಂಡರು, ಭಾಗವಹಿಸಿದರು.

Leave a Reply

Your email address will not be published. Required fields are marked *