ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಫೆಬ್ರವರಿ 13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವಿ ಪ್ರವೀಣ್ ಅವರು ತಿಳಿಸಿದ್ದಾರೆ.
ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ಅಂಚೆ ಪತ್ರದ ಮೂಲಕ ಫೆಬ್ರವರಿ 10 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.13 ರಂದು ಸಾರಿಗೆ ಅದಾಲತ್

ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಸಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರ ದೂರು, ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಫೆ.13 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಸಾರಿಗೆ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಅದಾಲತ್ ನಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಅರ್ಜಿ ಮೂಲಕ ಸ್ವೀಕರಿಸಿ ಇತ್ಯರ್ಥಗೊಳಿಸಲಾಗುವುದು. ಸಾರ್ವಜನಿಕರು ತಮ್ಮ ಬಾಕಿ ಇರುವ ಅರ್ಜಿಗಳನ್ನು ಅದಾಲತ್ ನಲ್ಲಿ ಭಾಗವಹಿಸಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *