ಮಾನ್ವಿ: ಪಟ್ಟಣದ ಶ್ರೀ ಪಂಪಾ ವಿರೂಪಾಕ್ಷೇಶ್ವರ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ಬೀಳ್ಕೊಡುಗೆ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲ್ಮಠ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿ ವಿದ್ಯಾರ್ಥಿಗಳಿಗೆ ಆಸಕ್ತಿ ಮತ್ತು ಪರಿಶ್ರಮ ವಿದ್ಯಾಭ್ಯಾಸಕ್ಕೆ ಪೂರಕವಾಗಿವೆ ಜೀವನದಲ್ಲಿ ಶಿಸ್ತುನ್ನು ರೂಡಿಸಿಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸು ಪಡೆಯುವುದಕ್ಕೆ ಸಾಧ್ಯ ಎಂದು ತಿಳಿಸಿದರು.
ಶಿಕ್ಷಣ ಮಹರ್ಷಿ ಲಿಂ. ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯ ಸ್ಮರಣೆ ಅಂಗವಾಗಿ ಶಾಲೆಯ ಆವರಣದಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿ ಕ್ರ‍್ಯಾಕಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಾದ ನೀರಮಾನ್ವಿಯ ಆದರ್ಶ ವಿದ್ಯಾಲಯದ ಶಶಾಂಕ್, ಕನ್ಯಾ ಪ್ರೌಢಶಾಲೆಯ ವಿದ್ಯಾರ್ಥಿನಿ ಆಯಿಷಾ ಬೇಗಂ ರವರಿಗೆ ತಲಾ 15ಸಾವಿರ ಪ್ರತಿಭಾ ಪುರಸ್ಕಾರ ಹಾಗೂ ದ್ವಿತೀಯ ಸ್ಥಾನ ಪಡೆದ ಎಂ.ಡಿ.ಆರ್.ಎಸ್. ರಾಜಲಬಂಡ ವಸತಿ ಶಾಲೆಯ ವಿದ್ಯಾರ್ಥಿನಿ ಸ್ಪೂರ್ತಿ ಹಾಗೂ ಕಲ್ಮಠ ಪ್ರೌಢಶಾಲೆಯ ದಿಲೀಪ್ ದಾಸ್ ರವರಿಗೆ ತಲಾ ಹತ್ತು ಸಾವಿರ ಪ್ರತಿಭಾ ಪುರಸ್ಕಾರ ಚೆಕ್ ಅನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂಗಯ್ಯ ಸ್ವಾಮಿ, ಕಾಲೇಜಿನ ಪ್ರಾಚಾರ್ಯ ಎಸ್. ಎಸ್ ಪಾಟೀಲ್ , ಪೋತ್ನಾಳ ಸರಕಾರಿ ಪ್ರೌಢಶಾಲೆಯ ಮುಖ್ಯಗುರು ವಲಿಬಾಬು, ಗೋರ್ಕಲ್ ಸರ್ಕಾರಿ ಪ್ರೌಢಶಾಲೆ ಮುಖ್ಯಗುರು ಕಮಲಾ ನಾಯ್ಕ್ , ಕಲ್ಮಠ ಪ್ರೌಢಶಾಲೆಯ ಮುಖ್ಯಸ್ಥರಾದ ಪ್ರಭುಸ್ವಾಮಿ, ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಮಂಜುನಾಥ ಕಮತರ್, ಪದವಿ ಕಾಲೇಜು ಪ್ರಾಚಾರ್ಯರಾದ ಸಿದ್ದನಗೌಡ ಉಪನ್ಯಾಸಕ ಅಯ್ಯಪ್ಪ ಅಕ್ಕಸಾಲಿ, ಆನಂದ್ ಕುಮಾರ್, ಹನುಮಂತ, ಮಾರ್ಟಿನ್ ಸೇರಿದಂತೆ ಶಾಲೆಯ ಉಪನ್ಯಾಸಕರು. ವಿದ್ಯಾರ್ಥಿಗಳು ಇದ್ದರು

Leave a Reply

Your email address will not be published. Required fields are marked *