ಕೊಪ್ಪಳ : ಜಿಲ್ಲಾಡಳಿತದ ವತಿಯಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್ 1 ರಂದು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಸಂಬ0ಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದ ಮುಖಂಡರ ಆಶಯದಂತೆ ಜಿಲ್ಲಾ ಮಟ್ಟದ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 8 ಗಂಟೆಗೆ ಶ್ರೀ ರೇಣುಕಾಚಾರ್ಯ ಅವರ ಭಾವಚಿತ್ರದ ಮೆರವಣಿಗೆಯು ನಗರದ ಗವಿಮಠದಿಂದ ಪ್ರಾರಂಭಗೊ0ಡು ಜವಾಹರ ರಸ್ತೆ ಮೂಲಕ ಅಶೋಕ ವೃತ್ತದವರೆಗೆ ಜರುಗಲಿದೆ. ಬಳಿಕ 10.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪೂಜೆ, ಶ್ರೀ ರೇಣುಕಾಚಾರ್ಯರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.

ಸಮಾರಂಭ ದಿನದಂದು, ಮೆರವಣಿಗೆ ಮಾರ್ಗದ ಸ್ವಚ್ಛತೆ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಒದಗಿಸಬೇಕು. ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಸಂಬ0ಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬ0ಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯಂತಿ ಕಾರ್ಯಕ್ರಮ ಯಶಸ್ವಿಗೆ ಸಮಾಜದ ಎಲ್ಲಾ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ರೇಣುಕಾಚಾರ್ಯರ ಸಮಾಜದ ಮುಖಂಡರಾದ ಹಂಪಯ್ಯ ಮೆತಗಲ್ಲ, ಬಸವರಾಜ ಗೌರಿಮಠ, ಶಿವಕುಮಾರ್ ಹಿರೇಮಠ, ನೀಲಕಂಠಯ್ಯ ಹಿರೇಮಠ, ನಾಗಭೂಷಣ ಸಾಲಿಮಠ, ಎಸ್.ಎಸ್. ಹಿರೇಮಠ, ಗಿರೀಶ ಹಿರೇಮಠ, ದಯಾನಂದ ಸಿ.ಎಸ್., ನಾಗಬಸಯ್ಯ, ರವಿ ಹಿರೇಮಠ್, ಅರುಣಕುಮಾರ್, ಶರಣಯ್ಯ ಹಿರೇಮಠ, ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *