ರಾಯಚೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ BCT LBK ಪಿಯು ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರಸಪ್ರಶ್ನೆ ವಿಭಾಗದಲ್ಲಿ ಸಾಗರ್ ಮತ್ತು ಮಾನಸ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಚರ್ಚಾ ಸ್ಪರ್ಧೆಯಲ್ಲಿ ವೀಣಾ ತಂದೆ ಬಸವರಾಜ್ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯು ದ್ವಿತೀಯ ಸ್ಥಾನವನ್ನು ಸಾಧಿಸಿದ್ದಾರೆ ಮತ್ತು ಅದೇ ರೀತಿಯಾಗಿ ಪ್ರಬಂಧ ಸ್ಪರ್ಧೆಯಲ್ಲಿ ಅರ್ಪಿತ ಎನ್ನುವ ದ್ವಿತೀಯ ಪಿಯುಸಿಯ ವಿದ್ಯಾರ್ಥಿನಿಯು ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಕಾಲೇಜಿನ ಘನತೆಯನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದಾರೆ
ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಪರಶುರಾಮ ಮಲ್ಲಾಪುರ್ ಉಪಾಧ್ಯಕ್ಷರಾದ ಶಂಕರ್ ಪತ್ತಾರ್ ಕಾರ್ಯದರ್ಶಿಯಾದ ಡಾ. ಅರುಣ್ ಕುಮಾರ್ ಬೇರಗಿ ಖಜಾಂಚಿಗಳಾದ ಜಯಪ್ಪ ಗೊರೆಬಾಳ್ ಪ್ರಾಚಾರ್ಯರಾದ ಶಿವಕುಮಾರ್ ಬಿಂಗಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ವಸಂತ್ ಕುಮಾರ್ ಬಂಗಿ ಮತ್ತು ಎಲ್ಲಾ ಉಪನ್ಯಾಸಕ ವರ್ಗ ಮತ್ತು ಬೋಧಕೇತರ ವರ್ಗ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ


