ಜಿಲ್ಲಾ ಕೇಂದ್ರದ ಸಮೀಪ ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವ ಕಾರ್ಖಾನೆಗಳ ನಿಯಂತ್ರಣಕ್ಕೆ ಒತ್ತಾಯಿಸಿ, ಕಾರ್ಖಾನೆಗಳ ವಿಸ್ತರಣೆಗೆ ಅವಕಾಶ ಕೊಡದಂತೆ ಆಗ್ರಹಿಸಿ ಫೆಬ್ರವರಿ 24 ರಂದು ಕೊಪ್ಪಳ ಬಂದ್ ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾ ವೇದಿಕೆಯ ಪ್ರಮುಖರು 100 ದಿನಗಳಿಂದ ನಡೆದಿರುವ ಧರಣಿ ಕಾರ್ಯಕ್ರಮದಲ್ಲಿ ಕೊಪ್ಪಳ ಬಂದ್ ಮಾಡುವ ವಿಷಯ ಪ್ರಕಟಿಸಿದ್ದಾರೆ.ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕ ಅಲ್ಲಮ ಪ್ರಭು ಬೆಟ್ಟದೂರು ಮಾತನಾಡಿ, 2025ರಲ್ಲಿ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಕೊಪ್ಪಳ ಬಂದ್ ಮಾಡಲಾಗಿತ್ತು. ಈ ಬಾರಿಯೂ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಕೊಪ್ಪಳ ಸಮೀಪದ ಗ್ರಾಮಗಳಲ್ಲಿ ಒಂದೇ ಕಡೆ ನೂರಾರು ಕಾರ್ಖಾನೆಗಳು ಕೇಂದ್ರೀಕೃತವಾಗಿರುವುದರಿಂದ ಜನರಿಗೆ ಉತ್ತಮ ಭೂಮಿ, ಗಾಳಿ ಸಿಗದಂತಾಗಿದೆ, ಸರ್ಕಾರ ಜನರ ಸಮಸ್ಯೆ ಬಗೆಹರಿಸಬೇಕು, ಇಲ್ಲವೇ ಜನರೇ ಮುಂದಿನ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಬೇಕು ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *