ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕಲಬುರಗಿ ನಗರದ ಉದನೂರು ರಸ್ತೆಯಲ್ಲಿರುವ ಜಯತೀರ್ಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ವಿಶೇಷ ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮೊದಲ ಮೂರು ಸ್ಥಾನಗಳನ್ನು ಪಡೆದ ಕಲಬುರಗಿ ಹಾಗೂ ಬೆಳಗಾವಿ ವಿಭಾಗದ ಸಾಧಕ ವಿದ್ಯಾರ್ಥಿಗಳಿಗೆ ‘ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ’ ಪ್ರದಾನ ಮಾಡಲಾಯಿತು.

ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಒಟ್ಟು 61 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅವರ ಮುಂದಿನ ಉನ್ನತ ಶಿಕ್ಷಣ ಹಾಗೂ ಭವಿಷ್ಯ ಜೀವನಕ್ಕೆ ಶುಭ ಹಾರೈಸಲಾಯಿತು. ವಿದ್ಯಾರ್ಥಿಗಳ ಈ ಸಾರ್ಥಕ ಸಾಧನೆ ಇತರರಿಗೆ ಪ್ರೇರಣೆಯಾಗಲಿ, ನಮ್ಮ ನಾಡಿನ ಯುವಶಕ್ತಿ ದೇಶದ ಪ್ರಗತಿ ಹಾಗೂ ಉನ್ನತಿಗೆ ಶ್ರಮಿಸಲು ಸಚಿವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅಲ್ಲಮ ಪ್ರಭು ಪಾಟೀಲ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಸಗೋಡು ಜಯಸಿಂಹ ಸೇರಿದಂತೆ ಬ್ರಾಹ್ಮಣ ಸಮಾಜದ ಮುಖಂಡರು, ಗಣ್ಯರು ಹಾಗೂ ಪಾಲಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *