ಸಿಂಧನೂರು ಫೆಬ್ರವರಿ 09: ಫ್ರೆಂಡ್ಸ್ ವೆಲ್ಫೇರ್ ಆರ್ಗನೈಸೇಶನ್ ಬೆಂಗಳೂರು ‌ ಹಾಗೂ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ಪೋತ್ನಾಳ ಇವರು ಸಂಯುಕ್ತ ಆಶ್ರಯದಲ್ಲಿ ಸುಟ್ಟ ಗಾಯಗಳಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಕ್ರಮದ ಮಾಹಿತಿ ನೀಡುವ ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾದಲ್ಲಿ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಸುಟ್ಟ ಗಾಯಗಳಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರದ ಕುರಿತು ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ಪೋತ್ನಾಳನ ಸದಸ್ಯರಾದ ಚಾರ್ಲಿ ಉದ್ಬಾಳ ಅವರು ಮಾಹಿತಿ ನೀಡಿ ಮಾತನಾಡಿದರು. ಅವರು ಸುಟ್ಟ ಗಾಯಗಳಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಬೆಂಗಳೂರು ಭಗವಾನ್ ಮಹಾವೀರ ಜೈನ್ ಆಸ್ಪತ್ರೆ ಬೆಂಗಳೂರನಲ್ಲಿ. ಮೇ 09,2026 ತಪಾಸಣೆ ಮತ್ತು ಮೇ 10 ರಿಂದ 19, 2026 ವರೆಗೆ ಶಿಬಿರ ಹಮ್ಮಿಕೊಳ್ಳಲಾಗಿದೆ‌. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಫ್ರೆಂಡ್ಸ್ ವೆಲ್ಫೇರ್ ಆರ್ಗನೈಸೇಷನ್ ಇವರು 1995 ರಲ್ಲಿ ಸ್ಥಾಪಿತವಾದ ಸಂಸ್ಥೆ ಒಂದು ಲಾಭರಹಿತ ಸ್ವಯಂಸೇವಾ ಸಂಸ್ಥೆಯಾಗಿದೆ. ಸುಮಾರು ಮೂರು ದಶಕಗಳ ಅನುಭವ ಹೊಂದಿರುವ ಈ ಸಂಸ್ಥೆ ಹಿಂದುಳಿದ ಸಮುದಾಯಗಳಿಗೆ ಉಚಿತ ಪುನರ್ ನಿರ್ಮಾಣ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆಯನ್ನು ಅನ್ನು ಒದಗಿಸುತ್ತದೆ. ಸುಮಾರು 4500 ಕ್ಕಿಂತಲೂ ಹೆಚ್ಚು ಜನರಿಗೆ ಉಚಿತ ಚಿಕಿತ್ಸೆಯನ್ನು ದೊರಕಿಸಿದೆ. ಇದರಿಂದ ಅನೇಕ ದೈಹಿಕ ಕಾರ್ಯಕ್ಷಮತೆ ಗೌರವ ಮತ್ತು ಆತ್ಮವಿಶ್ವಾಸವನ್ನು ಮೂರು ಪಡೆಯಲು ಸಾಧ್ಯವಾಗುತ್ತದೆ ಇದರ ಉಪಯೋಗವನ್ನು ಪಡೆದುಕೊಳ್ಳಿ ಎಂದು ಚಾರ್ಲಿ ಉದ್ಬಾಳ ಅವರು ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ತಿಳಿಸಿದರು.
ನಂತರ ಮಾತನಾಡಿದ ಡಾಕ್ಟರ ಪ್ರೀತಾ ಪಾಟೀಲ ವೈದ್ಯಾಧಿಕಾರಿಗಳು ಅವರು ಆಶಾ ಕಾರ್ಯಕರ್ತೆಯರು ಸುಟ್ಟ ಗಾಯಗಳಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರದ ಕುರಿತು ಸಮುದಾಯಗಳಿಗೆ ಮಾಹಿತಿ ನೀಡಿ ಸದುಪಯೋಗ ಪಡೆದುಕೊಳ್ಳುವಂತೆ ಮಾಹಿತಿಯನ್ನು ನೀಡಲು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ. ಸಮುದಾಯ ಆರೋಗ್ಯ ಅಧಿಕಾರಿಗಳು. ಮೇರಿ ಮತ್ತು ಶೋಭಾ . ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಪಾರ್ವತಿ. ನಿಂಗಮ್ಮ‌ ರಾಧಾ . ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಹೇಶ ಉದಯಕುಮಾರ. ಅಂಬಮ್ಮ. ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *