ಸಿಂಧನೂರು: ತಾಲೂಕಿನ ಪಂಚಾಯಿತಿ ಕಚೇರಿ ಎದುರುಗಡೆ ಕಾರ್ಯನಿರ್ವಹಿಸುತ್ತಿರುವ ಸ್ಪರ್ಧಾ ಬೆಳಕು ಅಕಾಡೆಮಿಯು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳ ಉಚಿತ ತರಬೇತಿಯನ್ನು ನೀಡುತ್ತಿದೆ. ಯುವಜನತೆಗೆ ಉತ್ತಮ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಸಂಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.
ಈ ಅಕಾಡೆಮಿಯಲ್ಲಿ ಕೆಎಎಸ್, ಕೆಪಿಎಸ್‌ಸಿ, ಬ್ಯಾಂಕ್, ಎಸ್‌ಎಸ್‌ಸಿ, ಪೋಲೀಸ್, ರೈಲ್ವೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ನೀಡಲಾಗುತ್ತಿದೆ. ಅನುಭವಿ ತರಬೇತುದಾರರಿಂದ ಗುಣಮಟ್ಟದ ಬೋಧನೆ, ವಿಷಯಾಧಾರಿತ ಅಧ್ಯಯನ, ನೋಟ್ಸ್ ವಿತರಣೆ ಹಾಗೂ ಪರೀಕ್ಷಾ ಮಾದರಿಯ ಅಭ್ಯಾಸವನ್ನು ಒದಗಿಸಲಾಗುತ್ತಿದೆ.
ಪ್ರತಿ ರವಿವಾರ ಕಿರುಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಉತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸ್ಪರ್ಧಾತ್ಮಕ ಸಾಮರ್ಥ್ಯ ಹೆಚ್ಚಾಗುತ್ತಿದೆ.
ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಉಚಿತ ತರಬೇತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕೆಂದು ಅಕಾಡೆಮಿಯ ಮುಖ್ಯಸ್ಥರಾದ ರಾಕೀ ವೈ.ಎಲ್ ಅವರು ಮನವಿ ಮಾಡಿದ್ದಾರೆ.
ಸಿಂಧನೂರಿನ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ಬೆಳಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

