ಮಾನವಿ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಷ್ಟೂರು ಇವರ ವತಿಯಿಂದ ಶಾಲಾ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು ಕಾರ್ಯಕ್ರಮದ ಆರಂಭದಲ್ಲಿ ದೀಪ ಬೆಳಗಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಈ ಸಮಾರಂಭದಲ್ಲಿ ತಹಶಿಲ್ದಾರರಾದ ಭೀಮರಾಯ ರಾಮಸಮುದ್ರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು. ಶಿಕ್ಷಕರ ಸಮರ್ಪಿತ ಸೇವೆಯಿಂದಲೇ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಿಸ್ತು, ಶ್ರಮ ಮತ್ತು ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.

ನಂತರ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಸ್ವಾಗತ ಗೀತೆ, ನೃತ್ಯ, ನಾಟಕ, ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ ಎಲ್ಲರ ಮನಸೆಳೆದಿತು.

ಬೀಳ್ಕೊಡುಗೆ ಸಮಾರಂಭದ ಅಂಗವಾಗಿ ಶಾಲೆಯಿಂದ ಹೊರಹೋಗುವ ಹಿರಿಯ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಅವರ ಮುಂದಿನ ಶಿಕ್ಷಣ ಜೀವನದಲ್ಲಿ ಯಶಸ್ಸು ದೊರಕಲೆಂದು ಗಣ್ಯರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಾಲೆಯ ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ವರ್ಷದ ಶೈಕ್ಷಣಿಕ ಸಾಧನೆ, ಕ್ರೀಡಾ ಚಟುವಟಿಕೆಗಳು ಹಾಗೂ ವಿವಿಧ ಸ್ಪರ್ಧೆಗಳಲ್ಲಿನ ಯಶಸ್ಸಿನ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪಾಲಕರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *