ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾಂಶದ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ.
ನಿಗಮದಿಂದ ವಾಹನ ಖರೀದಿಗೆ 3.00 ಲಕ್ಷ ರೂ.ಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳ/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಾದ ರಾಯಚೂರು, ಸಿಂಧನೂರು ಕ್ಷೇತ್ರದ ಮರಾಠ ಜನಾಂಗದ ಹಿಂದುಳಿದ ವರ್ಗಗಳ ಪ್ರವರ್ಗ-3 ಬಿಅಡಿಯಲ್ಲಿ 2(ಎ)ರಿಂದ 2 (ಎಫ್) ವರೆಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ 3,00,00 ರೂ.ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳಮಿತಿಯಲ್ಲಿರಬೇಕು.
ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯನ್ನುಪಡೆಯಲು ಮರಾಠ ಜನಾಂಗದಲ್ಲಿ ಪ್ರವರ್ಗ 3-ಬಿ ಅಡಿಯಲ್ಲಿ 2(ಎ) ರಿಂದ 2(ಎಫ್)ವರೆಗೆ ಬರುವ (ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ಆರ್ಯಾಮರಾಠ (ಸಿ)ಆರ್ಯ, ಆರ್ಯರು (ಡಿ)ಕೊಂಕಣ ಮರಾಠ (ಇ) ಕ್ಷತ್ರಿಯ ಮರಾತ/ಕ್ಷತ್ರಿಯ ಮರಾಠ (ಎಫ್) ಕುಳವಾಡಿ ಜಾತಿಗಳಿಗೆ ಅನ್ವಯವಾಗುತ್ತದೆ.
ಯೋಜನೆಯಡಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯು ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಮರಾಠ ಜನಾಂಗದ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನುಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ದಿನಾಂಕ: 05.03.2026ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನಿಗಮದ ವೆಬೆಸೈಟ್ ವಿಳಾಸ: http://kmcdc.karnataka.gov.in/kn/ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-29903994 ಮತ್ತು 8867537799 ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *