ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 20ರಂದು ಸಂತಕವಿ ಸರ್ವಜ್ಞ ಜಯಂತಿ ಜಯಂತಿ ನಡೆಯಲಿವೆ.
ಈ ಜಯಂತಿಗಳ ಅಂಗವಾಗಿ ಫೆ.11ರ ಬೆಳಿಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ಸಮಾಜದ ಮುಖಂಡರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

