ತಾಳಿಕೋಟಿ: ಸಮಾಜದ ಉನ್ನತಿ ಹಾಗೂ ಪ್ರಗತಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ ಅದು ಸಮಾಜದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಸ್ಕಿ ಫೌಂಡೇಶನ್ ಕೊಣ್ಣೂರ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮಂಗಳವಾರ ಪಟ್ಟಣದ ಟೀಪು ನಗರ ಬಡಾವಣೆಯಲ್ಲಿ ಇಕರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವತಿಯಿಂದ ಹಮ್ಮಿಕೊಂಡ 19ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು. ಇಕರಾ ಶಿಕ್ಷಣ ಸಂಸ್ಥೆಯು ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ತರುವ ಕಳಕಳಿಯಿಂದ ಕಳೆದ 19 ವರ್ಷಗಳಿಂದ ನಿರಂತರವಾಗಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ, ನಮ್ಮ ಫೌಂಡೇಶನ್ ವತಿಯಿಂದ ಈ ಸಂಸ್ಥೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರ ಮಠ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಉರ್ದು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಇದರ ಕುರಿತು ಸಮಾಜದ ಗಣ್ಯರು ಚಿಂತಿಸಬೇಕು. ಈ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರಗಳನ್ನು ಕೊಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದರು. ಇದೇ ಸಂದರ್ಭದಲ್ಲಿ ಕಳೆದ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಇಕರಾ ಉರ್ದು ಶಾಲೆ ವಾರ್ಷಿಕೋತ್ಸವದಲ್ಲಿ ಅಧ್ಯಕ್ಷ ಅಸ್ಕಿ ಅಭಿಮತ ಶಿಕ್ಷಣದಿಂದಲೇ ಸಮಾಜದ ಪ್ರಗತಿ ಸಾಧ್ಯ ತಾಳಿಕೋಟಿ: ಸಮಾಜದ ಉನ್ನತಿ ಹಾಗೂ ಪ್ರಗತಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ ಅದು ಸಮಾಜದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಸ್ಕಿ ಫೌಂಡೇಶನ್ ಕೊಣ್ಣೂರ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮಂಗಳವಾರ ಪಟ್ಟಣದ ಟೀಪು ನಗರ ಬಡಾವಣೆಯಲ್ಲಿ ಇಕರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವತಿಯಿಂದ ಹಮ್ಮಿಕೊಂಡ 19ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು. ಇಕರಾ ಶಿಕ್ಷಣ ಸಂಸ್ಥೆಯು ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ತರುವ ಕಳಕಳಿಯಿಂದ ಕಳೆದ 19 ವರ್ಷಗಳಿಂದ ನಿರಂತರವಾಗಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ, ನಮ್ಮ ಫೌಂಡೇಶನ್ ವತಿಯಿಂದ ಈ ಸಂಸ್ಥೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರ ಮಠ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಉರ್ದು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಇದರ ಕುರಿತು ಸಮಾಜದ ಗಣ್ಯರು ಚಿಂತಿಸಬೇಕು. ಈ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರಗಳನ್ನೂ ಕೊಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದರು. ಇದೇ ಸಂದರ್ಭದಲ್ಲಿ ಕಳೆದ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಬಿ.ಎಲ್.ಬಿರಾದಾರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ ಹುದಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಐ.ಕೆಂಭಾವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಸದಸ್ಯ ಪ್ರಭುಗೌಡ ಮದರಕಲ್ಲ, ವಿಜಯಪುರ ಮಾಜಿ ಮೇಯರ ಅಬ್ದುಲ್ ರಜಾಕ ಹೊರ್ತಿ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮೆಹಬೂಬ ಕೆಂಭಾವಿ, ಅಲ್ಪಸಂಖ್ಯಾತ ಮುಖಂಡ ನಿರಂಜನಶಾ ಮಕಾನದಾರ, ಪ್ರೌಢ ಶಾಲೆ ಸಂಚಾಲಕ ಸಲಾವುದ್ದೀನ ಇರ್ಫಾನ ಖಾಜಿ,ಹಸನಸಾಬ ಕೊರ್ಕಿ, ಶಫೀಕ ಇನಾಮದಾರ, ಮುಖ್ಯ ಗುರುಗಳಾದ ಜಾವೀದ ಎಂ.ಕೆಂಭಾವಿ, ಮುರ್ತುಜಾ(ಮುದ್ದು) ಪಟೇಲ, ಎಸ್.ಎ.ನಾಲಬಂದ, ಮೈನುದ್ದೀನ ಸಿಪಾಯಿ, ಮಶಾಕ್ ಪಟೇಲ, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಶಿಕ್ಷಕಿ ಬಿ.ಎಲ್.ಬಿರಾದಾರ ನಿರೂಪಿಸಿದರು.

