ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯ ಗೆದ್ದಲಮರಿ ಹತ್ತಿರ ಇರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ ಫೆಬ್ರವರಿ 14ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ ಹಾಗೂ
ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ಫೆಬ್ರವರಿ 22ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 21 ಕೊನೆಯ ದಿನಾಂಕವಾಗಿದೆ. ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ರಿಯಾಯಿತಿ ಹಾಗೂ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ
ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ತಿಳಿಸಿದ್ದಾರೆ.
ಬುಧವಾರ ಶಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಸಿ.ಎಸ್. ನಾಡಗೌಡ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಆದಾಯ ತೆರಿಗೆ ಇಲಾಖೆ ಆಯುಕ್ತ ಶಿವಾನಂದ ಕಲಕೇರಿ, ಸಿಂದಗಿ ಶಾಸಕ ಅಶೋಕ ಮನಗೂಳಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಜ್ಯೋತಿ ಬೆಳಗಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು.
ಶಾಲೆಯ ಪ್ರಿನ್ಸಿಪಾಲ್ ರಿಷಿಕಾ ನಾಯ್ಕ ಹಾಗೂ ಉಪಪ್ರಿನ್ಸಿಪಾಲ್ ಸಲ್ಮಾನ್ ಖಾನ್ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಒದಗಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಿಬಿಎಸ್‌ಸಿ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಶಾಲೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಲೆಯ ಪ್ರಾಚಾರ್ಯ ಸಲ್ಮಾನ್ ಖಾನ್ ಎಚ್., ರಿಷಿಕಾ ನಾಯ್ಕ, ಮಾರ್ಗದರ್ಶಕ ಶಿವನಗೌಡ ಬಿರಾದಾರ ಹಾಗೂ ಕಾರ್ಯದರ್ಶಿ ಎಸ್.ಎಸ್. ಬಿರಾದಾರ ಉಪಸ್ಥಿತರಿದ್ದರು.

