ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವÀ-ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸಿದ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ 4 ವಾರಗಳ ಬ್ಯೂಟಿಪಾರ್ಲರ್ ತರಬೇತಿ ಕಾರ್ಯಕ್ರಮವನ್ನು ಫೆ.18ರಿಂದ ರಾಯಚೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಉದ್ಯಮಶೀಲತೆಯ ಗುಣಲಕ್ಷಣಗಳು ಸ್ವಂತ ಉದ್ಯೋಗ ಸ್ಥಾಪಿಸಲು ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಮತ್ತು ಸಾಲ ಸೌಲಭ್ಯಗಳ ಮಾಹಿತಿ ಹಾಗೂ ಸ್ವಯಂ ಉದ್ಯಮಗಳನ್ನು ಸ್ಥಾಪಿಸಲು ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.
ಜಿಲ್ಲೆಯ ಆಸಕ್ತ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು 18 ವರ್ಷ ದಿಂದ 35 ವರ್ಷ ವಯಸ್ಸಿನವರಾಗಿರಬೇಕು. ಕನಿಷ್ಠ ಹತ್ತನೇ ತರಗತಿ ಪಾಸಾಗಿರಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವವರು ದಿನಾಂಕ: 16-02-2026ರೊಳಗಾಗಿ ಮೊಬೈಲ್ ಸಂಖ್ಯೆ: 9986600631ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಅಥವಾ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ, ನವೀನ ಆಸ್ಪತ್ರೆ ಪಕ್ಕದಲ್ಲಿ, ರಾಯಚೂರು ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

