ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಪಿ.ರಘು ಅವರು ಫೆ.17 ರಿಂದ 19ವರೆಗೆ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ಫೆ.17ರ ಸಂಜೆ 4 ಗಂಟೆಗೆ ಯಾದಗಿರಿಯಿಂದ ಹೊರಟು ಸಂಜೆ 6ಕ್ಕೆ ರಾಯಚೂರು ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಫೆ.18ರ ಬೆಳಿಗ್ಗೆ 10 ಗಂಟೆಗೆ ನಗರದ ರಿಮ್ ಆಸ್ಪತ್ರೆಗೆ ಭೇಟಿ ನೀಡುವರು. ಮತ್ತು ಮ್ಯಾನ್‌ಹೋಲ್ ಸ್ವಚ್ಛತೆ ಘಟನೆ ಬಗ್ಗೆ ಪರಿಶೀಲನೆ ನಡೆಸುವರು. ಬಳಿ ಬೆಳಿಗ್ಗೆ 11 ಗಂಟೆಗೆ ರಾಯಚೂರು ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ನಡೆಸುವರು. ಮಧ್ಯಾಹ್ನ 12.30ಕ್ಕೆ ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರಕಾರ್ಮಿಕರಿಗೆ ಸಂಬAಧಿಸಿದAತೆ ಅಧಿಕಾರಿಗಳೊಡನೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿ ರಾಯಚೂರಿನಲ್ಲಿ ವಾಸ್ತವ್ಯ ಹೂಡುವರು. ಫೆ.19ರ 10 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
