ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು ಫೆ.16ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಫೆ.15ರಂದು ರಾತ್ರಿ 11.20ಕ್ಕೆ ರೈಲು ಮಾರ್ಗವಾಗಿ ಹೊರಟು ಫೆ.16ರ ಬೆಳಗ್ಗೆ 8.20ಕ್ಕೆ ರಾಯಚೂರು ನಗರಕ್ಕೆ ಆಗಮಿಸಿ ನಗರದ ಅತಿಥಿ ಗೃಹದಲ್ಲಿ ವಿಶ್ರಾಂತಿ ಪಡೆಯುವರು. ಬಳಿಕ ಬೆಳಿಗ್ಗೆ 11.30ಕ್ಕೆ ರಾಯಚೂರಿನ ಡಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಭೇಟಿ ಹಾಗೂ ಪತ್ರಿಕಾಗೋಷ್ಠಿ ನಡೆಸುವರು. ರಾತ್ರಿ 8 ಗಂಟೆಗೆ ನಗರದ ಮಹಿಳಾ ಸಮಾಜದ ಆವರಣದಲ್ಲಿ ನಡೆಯುವ ಉಮ್ರಾ ಯಾತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 11.10ಕ್ಕೆ ರಾಯಚೂರಿನಿಂದ ರೈಲು ಮಾರ್ಗವಾಗಿ ಹೊರಟು ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *