ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿಯು ಮೈಸೂರು ವಿಭಾಗ ಮಟ್ಟದ ಪತ್ರಕರ್ತರಿಗೆ ಸಂವಿಧಾನ ಮತ್ತು ಪತ್ರಿಕೋದ್ಯಮ, ಫ್ಯಾಕ್ಟ್ ಚೆಕ್ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಬಳಕೆ ಕುರಿತಂತೆ ಫೆಬ್ರವರಿ 27 ರಂದು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿದೆ.
ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಹಿನ್ನೆಲೆಯಲ್ಲಿ ಪತ್ರಕರ್ತರು ಈ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ತರಬೇತಿ ಸಹಕಾರಿಯಾಗಲಿದೆ ಎಂದು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.
ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪತ್ರಕರ್ತರು ಗೂಗಲ್ ಫಾರ್ಮ್ https://forms.gle/ZJ4X7NjBodXmzeUu5 ನ್ನು ಭರ್ತಿ ಮಾಡಿ ದಿನಾಂಕ 20-02-2026ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯ ಆಯ್ಕೆ ಕುರಿತಂತೆ ಅಕಾಡೆಮಿಯ ತೀರ್ಮಾನವೇ ಅಂತಿಮ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


