ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಸುಂದರೀಕರಣ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಭಾರತೀಯ ಸಂಸತ್ ಭವನದ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ. ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಳೆಯದಾಗಿ ಹಾಗೂ ದುರ್ಬಲ ಸ್ಥಿತಿಯಲ್ಲಿರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲು ಈಗಿರುವ ಪ್ರತಿಮೆಯನ್ನು ಮುಂದಿನ 3 ದಿನಗಳೊಳಗೆ ಸುರಕ್ಷಿತವಾಗಿ ತೆರವುಗೊಳಿಸುವುದು ಅಗತ್ಯವಾಗಿದೆ.
ಇದೇ ವೇಳೆ ರಾಯಚೂರು ಮಹಾನಗರ ಪಾಲಿಕೆಯಿಂದ ಅದೇ ಸ್ಥಳದಲ್ಲಿ ಹೊಸದಾಗಿ ಭವ್ಯವಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ವಿಷಯಕ್ಕೆ ಸಂಬAಧಿಸಿದAತೆ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ವಿವಿಧ ಸಮುದಾಯ ಸಂಘಟನೆಗಳೊAದಿಗೆ ಸಭೆಗಳನ್ನು ನಡೆಸಲಾಗಿದ್ದು, ನಗರದ ಎಲ್ಲಾ ನಾಗರಿಕರು ಸಾರ್ವಜನಿಕ ಹಿತಾಸಕ್ತಿಯ ಈ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ ನೀಡಬೇಕು ಹಾಗೂ ಕಾಮಗಾರಿ ಸುಗಮವಾಗಿ ನಡೆಯಲು ಸಹಯೋಗ ನೀಡುವಂತೆ ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
