ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಕೃಷಿ ಉದ್ಯಮಿ (ಕುರಿ ಸಾಕಣೆ)ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಕೃಷಿ ಉದ್ಯಮಿ (ಕುರಿ ಸಾಕಣೆ)ಗೆ ಕುರಿತು 13 ದಿನಗಳ ಕಾಲ ತರಬೇತಿ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆ ಇರುತ್ತದೆ. ಆಸಕ್ತರು 10ನೇ ತರಗತಿ ವ್ಯಾಸಂಗ ಮಾಡಿರುವ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳು ಆಧಾರ್ ಕಾರ್ಡ್ ಜೆರಾಕ್ಸ್, ಗ್ರಾಮೀಣ ಪಡಿತರ ಚೀಟಿ (ಬಿಪಿಎಲ್, ಪಿಎಚ್‌ಎಚ್, ಎನ್‌ಪಿಎಚ್‌ಎಚ್ ಮತ್ತು ಆಯ್‌ವೈ) ಜೆರಾಕ್ಸ್, 4 ಫೋಟೋಗಳು, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಹಾಗೂ ಪ್ಯಾನ್ ಕಾರ್ಡ್ ಜೆರಾಕ್ಸ್ನೊಂದಿಗೆ ನವೆಂಬರ್ 16ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಆಶಾಪೂರು ರಸ್ತೆ, ರಾಯಚೂರು. ಅಥವಾ ಮೊಬೈಲ್ ಸಂಖ್ಯೆ: 8217382735, 9742470999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

