ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸಂಜೀವ್ ರಡ್ಡಿ (45) ಎಂದು ಗುರುತಿಸಲಾಗಿದೆ.ಕಲಬುರಗಿ ವಿಭಾಗಕ್ಕೆ ಸೇರಿದ ಸಾರಿಗೆ ಬಸ್ ಮಸ್ಕಿ ಕಡೆಗೆ ಸಾಗುತ್ತಿದ್ದ ವೇಳೆ, ಮಸ್ಕಿಯಿಂದ ಮುಧೋಳ ಕಡೆಗೆ ಬರುತ್ತಿದ್ದ ಬೈಕ್ ತಿರುವು ಪಡೆಯುವಾಗ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಬಸ್ ಚಾಲಕ ಅತಿವೇಗದಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಢಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಘಟನೆಯ ಮಾಹಿತಿ ಪಡೆದ ಮಸ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಸ್‌ ಅನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಸ್ಕಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *