ಲಿಂಗಸಗೂರು : ಫೆ 15 .

ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2026-31 ವರಗಿನ ಚುನಾವಣೆಯಲ್ಲಿ ಆನೆಹೂಸೂರು (ಸಾಲಗಾರರ) ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ ಬಸನಗೌಡ ಸಂಗಣ್ಣ ಮೇಟಿ 48 ಮತಗಳನ್ನು ಪಡೆಯುವ ಮೂಲಕ ಹೇಮನಗೌಡರ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ‌. ಈ ಹಿಂದೆಯು ಸಹ (ಪಿಕಾರ್ಡ) ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿ ಅಧ್ಯಕ್ಷರಾಗಿದ್ದರು ಮತ್ತೆ ಈ ಬಾರಿ ಸ್ಪರ್ಧಿಸಿ ಎರಡನೇ ಬಾರಿಗೆ ಬಹು ಮತದ ಜಯಗಳಿಸಿದ್ದಾರೆ‌.ಜಯದ ಹರುಷ ವ್ಯಕ್ತಪಡಿಸಿ ಮಾತನಾಡಿದ ಬಿ.ಎಸ್ ಮೇಟಿ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ರೈತರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ರೀತಿಯಲ್ಲಿ ಕೆಲಸ ಮಾಡಿದ್ದೇನೆ ಆದರಿಂದ ರೈತ ಬಾಂಧವರು ನನ್ನ ಮೇಲೆ ನಂಬಿಕೆ ಇಟ್ಟು ಮತ್ತೊಮ್ಮೆ ಅವರ ಸೇವೆ ಮಾಡಲು ಮತವನ್ನು ಹಾಕುವ ಮೂಲಕ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಅವಕಾಶ ಕಲ್ಪಿಸಿದ್ದಾರೆ. ಈ ಬಾರಿಯು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಮಾಡುತ್ತೇನೆ ರೈತರಿಗೆ ಮತ್ತಷ್ಟು ರೀತಿಯಲ್ಲಿ ನನ್ನ ಆಡಳಿತಾವಧಿಯಲ್ಲಿ ಅನೇಕ ರೀತಿಯ ಕೆಲಸ ಕಾರ್ಯಗಳನ್ನು ಮಾಡುತ್ತೇನೆ ನನಗೆ ಮತ ಹಾಕಿದ ಪ್ರತಿಯೊಬ್ಬರಿಗೆ ನನ್ನ ಕೃತಜ್ಞತೆ ಸಲ್ಲಿಸುವೆ ಎಂದರು.

Leave a Reply

Your email address will not be published. Required fields are marked *