ದೇವದುರ್ಗ ಪ್ರವಾಸಿ ಮಂದಿರದಲ್ಲಿ ವರದಿಗಾರರ ಜೊತೆ ಮಾತನಾಡಿದ ಜಿಲ್ಲಾ ಕಾರ್ಯಧ್ಯಕ್ಷರಾದ ಮುಜಾಹಿದ್ ಮರ್ಚೆಡ್ ಅವರು, ರೈತರ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲು ರೈತ ಸೇನೆ ಸದಾ ಸಿದ್ಧವಾಗಿದೆ ಎಂದು ತಿಳಿಸಿದರು.

ದಿನಾಂಕ 15-02-2026ರಂದು ಬೆಳಿಗ್ಗೆ ರಾಯಚೂರು ತಾಲೂಕಿನ ಜೆ. ಮಲ್ಲಾಪೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ (ರಿ) ವತಿಯಿಂದ ರಾಯಚೂರು ಜಿಲ್ಲಾ ಅಧ್ಯಕ್ಷರಾದ ಇಂದ್ರಜೀತ್ ಯಾದವ್ ಅವರ ಆದೇಶದ ಮೇರೆಗೆ ವಿವಿಧ ಪದಾಧಿಕಾರಿಗಳ ನೇಮಕಾತಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಜಾಹಿದ್ ಮರ್ಚೆಡ್ ಅವರು, ರೈತರ ನೀರಿನ ಸಮಸ್ಯೆ, ಗೊಬ್ಬರ ಸಮಸ್ಯೆ ಸೇರಿದಂತೆ ಪ್ರತಿಯೊಂದು ಸಮಸ್ಯೆಗೆ ಸಂಘಟನೆ ಸ್ಪಂದಿಸಲಿದೆ ಎಂದರು. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಅನ್ಯಾಯ ನಡೆದರೂ ತಕ್ಷಣ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚುನಾವಣಾ ಸಮಯದಲ್ಲಿ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರು ಆರೋಪಿಸಿದರು.

ಈ ಸಂದರ್ಭದಲ್ಲಿ ರಾಯಚೂರು ತಾಲೂಕ ಅಧ್ಯಕ್ಷರಾದ ಯಲ್ಲಪ್ಪ ಅಂಬಿಗರ, ಉಪಾಧ್ಯಕ್ಷರಾದ ಬಸವ ಉಪ್ಪಾರ ಹಾಗೂ ಜಗದೀಶ್ ಗಂಜಳ್ಳಿ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ

Leave a Reply

Your email address will not be published. Required fields are marked *