ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ದಿನಾಂಕ ಫೆ 28 ರಿಂದ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿರುವುದರಿಂದ, ವಿದ್ಯಾರ್ಥಿಗಳಿಗೆ ಸುಲಭ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಅದರನ್ವಯ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ, ದಿನಾಂಕ ಫೆ 28 ರಿಂದ ಮಾ 17 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯಲ್ಲಿ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ *“ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರ”*ವನ್ನು ಪ್ರದರ್ಶಿಸುವ ಮೂಲಕ, ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಹಾಗೂ ಮರಳುವಾಗ ಕೆಳಕಂಡ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ:
ನಗರ ಬಸ್‌ಗಳು
ಹೊರವಲಯ ಬಸ್‌ಗಳು,ಸಾಮಾನ್ಯ ಬಸ್‌ಗಳು, ವೇಗದೂತ ಬಸ್‌ಗಳು
ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಮತ್ತು ನಿರ್ವಾಹಕರುಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರದ ಆಧಾರದ ಮೇಲೆ ಉಚಿತ ಪ್ರಯಾಣಕ್ಕೆ ಅನುಮತಿ ನೀಡುವಂತೆ ಸೂಕ್ತ ನಿರ್ದೇಶನ ನೀಡಲಾಗಿದೆ.
ಇದಲ್ಲದೆ, ಬಸ್ ಮಾರ್ಗಗಳಲ್ಲಿ ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಕೋರಿಕೆ ನಿಲುಗಡೆ (Request Stop) ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಚಾಲನಾ ಸಿಬ್ಬಂದಿಗಳು ಮೇಲ್ಕಂಡ ಎಲ್ಲಾ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು.
ಈ ವಿಷಯವನ್ನು ನಿಗಮದ ಎಲ್ಲಾ ಘಟಕಗಳು ಹಾಗೂ ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಿ, ಜಾರಿಗೊಳಿಸಲು ಕ್ರಮ ವಹಿಸುವಂತೆ ಸರ್ಕಾರದ ಆದೇಶ ಹೊರಡಿಸಿದ್ದಾರೆ

Leave a Reply

Your email address will not be published. Required fields are marked *