ಮಸ್ಕಿ: ತಾಲೂಕಿನಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆವಹಿಸಿ- ಶಾಸಕ ಆರ್.ಬಸನಗೌಡ
16-ಎಂ ಎಸ್ ಕೆ-01
ಮಸ್ಕಿ: ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗ್ರಾ.ಪಂ ಅಧಿಕಾರಿಗಳು ಈಗಿನಿಂದಲೇ ನಿಗಾವಹಿಸಬೇಕು ಎಂದು ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರವಿಹಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸೋಮವಾರ ಕುಡಿಯುವ ನೀರು ನಿರ್ವಹಣೆ ಕುರಿತು ನಡೆದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದ ಅವರು, ಬೇಸಿಗೆ ದಿನಗಳಲ್ಲಿ ಗ್ರಾಮೀಣ ಭಾಗದ ಪ್ರತಿ ಹಳ್ಳಿಗಳಲ್ಲಿ ತಲೆದೂರುವ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಂದ ಸಮಸ್ಯೆಗಳನ್ನು ಆಲಿಸಿ, ಕುಡಿಯುವ ನೀರಿನ ಯೋಜನೆ ಜೆಜೆಎಂ ಕಾಮಗಾರಿಗಳನ್ನು ೨-೩ ತಿಂಗಳ ಒಳಗಾಗಿ ಸಂಪೂರ್ಣ ಮುಗಿಸಬೇಕೆಂದರು. ಅರ್ಧಕ್ಕೆ ನಿಲ್ಲಿಸಿದ ಕಾಮಗಾರಿಗಳನ್ನು ಪಿಡಿಒಗಳ ಪರಿಶೀಲಿಸಿ ಕೂಡಲೇ ಆರಂಭಿಸುವAತೆ ಗುvತ್ತಿಗೆದಾರರಿಗೆ ಸೂಚಿಸಬೇಕೆಂದರು. ಖಾಸಗಿ ಬೋರ್‌ವೆಲ್‌ನಿಂದ ನೀರು ಪಡೆಯುವುದನ್ನು ಕಡಿಮೆ ಮಾಡಲು, ಸಾರ್ವಜನಿಕ ಬೋರವೆಲ್‌ಗಳನ್ನು ದುರಸ್ತಿ ಮಾಡಿಸಬೇಕು. ೧೫ನೇ ಹಣಕಾಸು ಯೋಜನೆಯ ಅನುದಾನವನ್ನು ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಬಳಸಿ, ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಪಂಚಾಯಿತಿಯಿAದ ಬೋರ್‌ವೆಲ್‌ಗಳನ್ನು ಕೊರೆಯಿಸಿಕೊಳ್ಳಿ. ಅನುದಾನ ನೀಡಿದಾಗ ಪೈಪ್‌ಲೈನ್ ಅಳವಡಿಸಿಕೊಳ್ಳುವಂತೆ ಸೂಚಿಸಿದರು.
ಸಿದ್ಧತೆ ಮಾಡಿಕೊಳ್ಳಿ: ಮಾರ್ಚ್ ಕೊನೆಗೆ ಅಥವಾ ಏಪ್ರೀಲ್ ಮೊದಲ ವಾರದಲ್ಲಿ ಎಡದಂಡೆ ನಾಲೆಗೆ ಕುಡಿಯುವ ನೀರು ಹರಿಸಲಾಗುತ್ತದೆ. ಕ್ಷೇತ್ರದಲ್ಲಿ ಒಟ್ಟು ೨೨ ಕೆರೆಗಳಿದ್ದು, ಕೆರೆಗಳನ್ನು ತುಂಬಿಸಿಕೊಳ್ಳಲು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
೪ ದಿನ ಸತತ ವಿದ್ಯುತ್ ಪೂರೈಸಿ: ಕುಡಿಯುವ ಸಲುವಾಗಿ ನಾಲೆಗೆ ನೀರು ಹರಿಸಿದಾಗ ಕೆಇಬಿ ಅಧಿಕಾರಿಗಳು ವಿದ್ಯುತ್ ಪೂರೈಸಲು ನೆಪಗಳನ್ನು ಹೇಳದಂತೆ ಸತತವಾಗಿ ೪ ದಿನ ವಿದ್ಯುತ್ ಪೂರೈಸಲು ವ್ಯವಸ್ಥೆ ಮಾಡಿಕೊಳ್ಳಬೇಕೆಂದರು.
ಹಳ್ಳಹಿಡಿಸಿದ ಗುತ್ತಿಗೆದಾರರು: ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ಕುಡಿಯುವ ನೀರು ಪೂರೈಸಲು ಸರಕಾರದಿಂದ ಕೋಟ್ಯಾಂತರ ಹಣವನ್ನು ವ್ಯಯಿಸಿ ಜೆಜೆಎಂ ಯೋಜನೆಯಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಆದರೆ ಕಾಮಗಾರಿಗಳನ್ನು ಅಧಿಕಾರಿಗಳು ಗುತ್ತಿಗೆದಾರರು ಸೇರಿಕೊಂಡು ಯೋಜನೆ ಉದ್ದೇಶವನ್ನು ಹಳ್ಳ ಹಿಡಿಸಿದ್ದಾರೆಂದು ಬೇಸಾರ ವ್ಯಕ್ತಪಡಿಸಿದರು.
ಸ್ವಚ್ಛವಾಗಿ ಇಟ್ಟುಕೊಳ್ಳಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಕಾರ್ಯಾ ವ್ಯಾಪ್ತಿಯ ಹಳ್ಳಿಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಕಿವಿ ಮಾತು ಹೇಳಿದರು. ಪಿಡಿಒಗಳು ಮನಸ್ಸು ಮಾಡಿದರೆ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳನ್ನು ತೀರಿಗಿ ನೋಡುವಂತೆ ಅಭಿವೃದ್ಧಿ ಮಾಡುವ ಅಧಿಕಾರವಿದೆ. ಬಳಕೆ ನೀರು ರಸ್ತೆ ಮೇಲೆ ಹರಿಯದಂತೆ ಹಿಂಗು ಗುಂಡಿಗಳನ್ನು ನಿರ್ಮಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕೆಂದರು.
ಸಮಸ್ಯೆಗಳಿದ್ದರೆ ತಿಳಿಸಿ: ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಸಲು ಕೆರೆಯಿಂದ ಅಥವಾ ಬೋರ್‌ವೆಲ್‌ಗಳಿಂದ ಪೈಪ್‌ಲೈನ್ ಅಳವಡಿಸಲು ಸೇರಿ ಇತರೆ ಸಮಸ್ಯೆಗಳಿದ್ದರೆ ಕೂಡಲೇ ಇಒ ಅವರ ಗಮನಕ್ಕೆ ತರಲು ಸೂಚಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಇಒ ಅಮರೇಶ ಯಾದವ, ತಹಸೀಲ್ದಾರ್ ಮಂಜುನಾಥ ಭೊಗಾವತಿ, ಸಾಹಯಕ ನಿರ್ದೇಶಕರು(ಪ.ರಾ.) ಸೋಮನಗೌಡ ಪಾಟೀಲ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಆರ್‌ಡಬ್ಲುö್ಯಎಸ್ ಇಲಾಖೆ ಅಧಿಕಾರಿಗಳು, ಟಿಎಲ್‌ಬಿಸಿ ಅಧಿಕಾರಿಗಳು, ಜೆಸ್ಕಾಂ ಅಧಿಕಾರಿಗಳು ಹಾಗೂ ಮಸ್ಕಿ, ಬಳಗಾನೂರು, ತುರವಿಹಾಳ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿದ್ದರು.

Leave a Reply

Your email address will not be published. Required fields are marked *