ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ ರಘು ಅವರು ಫೆ.19ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಫೆ.19ರ ಬೆಳಗ್ಗೆ 7 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ನೀಡುವರು. ಬಳಿಕ 10 ಗಂಟೆಗೆ ರಾಯಚೂರು ನಗರಕ್ಕೆ ಆಗಮಿಸಿ 10.30ಕ್ಕೆ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡುವರು. ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸುವರು. ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಪೌರ ಕಾರ್ಮಿಕರು ಮತ್ತು ಇತರೆ ಸಂಸ್ಥೆಗಳ ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಸುವರು. ಮಧ್ಯಾಹ್ನ 12.30ಕ್ಕೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರ ಕಾರ್ಮಿಕರಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಡನೆ ಪ್ರಗತಿ ಪರಿಶೀಲನೆ ನಡೆಸುವರು. ಬಳಿಕ ರಾಯಚೂರಲ್ಲಿ ವಾಸ್ತವ್ಯ ಮಾಡುವರು. ಫೆ.20ರಂದು ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.

