ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಮಾರ್ಚ 1ರಂದು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.24ರ ಬೆಳಗ್ಗೆ 11 ಗಂಟೆಗೆ ಯಕ್ಲಾಸಪುರ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಭೆಗೆ ಆಗಮಿಸಲು ಕೋರಿದೆ ಎಂದು ಪ್ರಕಟಣೆ ತಿಳಿಸಿದೆ.
