ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಫೆ.28 ರಿಂದ ಮಾರ್ಚ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.21ರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಖುದ್ದು ಹಾಜರಾಗಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *