ರೌಡಕುಂದ : ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆ ಸಿಂಗಾಪುರದಲ್ಲಿ 25-11-2025 ರಂದು ರೌಡಕುಂದ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಥೋತ್ಸವ 2025-26 ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಸಹಭಾಗಿತ್ವದಲ್ಲಿ ವಿವಿಧ ಕಲೆ ಸಂಸ್ಕೃತಿ , ಸಂಗೀತ ನೃತ್ಯ , ನಾಟಕ , ಚಿತ್ರಕಲೆ, ಕಥೆ , ಕವನ ವಾಚನ ಸೇರಿದಂತೆ ಹಲವಾರು ಸ್ಪರ್ಧೆಗಳು ನಡೆದವು , ರೌಡಕುಂದ ವಲಯ ಮಟ್ಟದ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಈ ಸಮಯದಲ್ಲಿ ಕಾರ್ಯಕ್ರಮದಲ್ಲಿ ವಿಜೇತರನ್ನು ಅಭಿನಂದಿಸಿ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ವಲಯ ಮಟ್ಟದ ರೌಡಕುಂದ ವಿಭಾಗ ಮಟ್ಟದ ಶಿಕ್ಷಕ ವೃಂದ ಮತ್ತು ಪೋಷಕರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸಿಂಗಾಪುರದ ಮುಖ್ಯ ಗುರುಗಳಿಗೆ, ಸಿಬ್ಬಂದಿ ವರ್ಗಕ್ಕೆ ಹಾಗೂ ಎಸ್ ಡಿ ಎಂ ಸಿ ಅಧ್ಯಕರು, ಸದಸ್ಯರು ,ಹಳೆಯ ವಿದ್ಯಾರ್ಥಿ ಬಳಗ ಗ್ರಾಮದ ಮುಖಂಡರುಗಳಿಗೆ ಅಭಿನಂದನೆ ಸಲ್ಲಿಸಿದರು

