ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ಕಳೆದ ರಾತ್ರಿ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು.

ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ತೀವ್ರ ಅಸ್ವಸ್ಥತೆ ಉಂಟಾಯಿತು. ಕೂಡಲೇ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಸದ್ಯ ಶ್ರೀಗಳು ಹೈದರಾಬಾದ್‌ನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *