ಮಾನ್ವಿ: ಪಟ್ಟಣದ ಕಲ್ಮಠ ಶ್ರೀ ಮುಕ್ತಾಗುಚ್ಚ ಬೃಹನ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಹುಟ್ಟು ಹಬ್ಬದ ಅಂಗವಾಗಿ ನ.27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ರಕ್ತದಾನ ಶಿಬಿರವನ್ನು ಶ್ರೀ ಮಠದ ಭಕ್ತರು ಹಾಗೂ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮಾನ್ವಿ ಶಾಖೆ,ರಿಮ್ಸ್ ರಕ್ತಭಂಡರ, ತಾಲೂಕು ಸಾರ್ವಜನಿಕ ಆಸ್ಪತ್ರೆ ಮಾನ್ವಿ ಮತ್ತು ಎನ್,ಎಸ್.ಎಸ್. ಘಟಕ ಸಹಯೋಗದಲ್ಲಿ ಪಟ್ಟಣದ ಕೆ.ಪಿ.ಎಸ್.ವಿ.ಎಸ್.ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಹಾಗೂ ಶ್ರೀ ಮಠದ ಭಕ್ತರು ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೆ.ಪಿ.ಎಸ್.ವಿ.ಎಸ್.ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಜೀವನೇಶ್ವರಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.
