ಲಿಂಗಸಗೂರ, ಫೆ.20 -ತಾಲೂಕು ಸಾರ್ವಜನಿಕ ಆಸ್ಪತ್ರೆ ಲಿಂಗಸಗೂರಿನಲ್ಲಿ ಎಲ್ಲಾ ಪಾಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿ ಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಕೆಲವು ವ್ಯಕ್ತಿಗಳು ಆಸ್ಪತ್ರೆಗೆ ನುಗ್ಗಿ, ಅತಿಕ್ರಮ ಪ್ರವೇಶ ಮಾಡಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂಧಿಸುವುದು. ಮಾನಸಿಕವಾಗಿ ಕಿರುಕುಳ ನೀಡುತ್ತಿ ರುವುದು ಕರ್ತವ್ಯಕ್ಕೆ ಅಡ್ಡಿಪಡಿಸು ತ್ತಿರುವುದು ಹಾಗೂ ವಿಡಿಯೋ ರೆಕಾರ್ಡಿಂಗ್ ಮಾಡಿ ಮಾನಸಿಕ ಕಿರುಕುಳ ನೀಡುತ್ತಿರುತ್ತಾರೆ.
ಇದರಿಂದ ವೈದ್ಯರು ಹಾಗೂ ಸಿಬ್ಬಂದಿಗಳು ಸುಗಮವಾಗಿ ಕಾರ್ಯ ನಿರ್ವಹಿಸಲು ತುಂಬಾ ತೊಂದರೆಯಾ ಗುತ್ತಿದ್ದು ಕೂಡಲೇ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಾಲೂಕ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಪ್ರತಿ ದಿನ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಆತಂಕದಲ್ಲಿ ಕಾರ್ಯನಿರ್ವಹಿಸುವ ಪರಿಸ್ಥಿತಿ ಉಂಟಾಗಿರುತ್ತದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡಬೇಕು. ಹಾಗೂ ಆಸ್ಪತ್ರೆಯಲ್ಲಿ ಕೆಲಸದ ಅವಧಿಯಲ್ಲಿ ಸೂಕ್ತ ಭದ್ರತೆ ಒದಗಿವುದು ಮತ್ತು ಸಾರ್ವಜನಿಕ ಆಸ್ಪತ್ರೆಗೆ ಔಟ್ ಪೋಲೀಸ್ ಚೌಕಿ ವ್ಯವಸ್ಥೆ ಕಲ್ಪಿಸಿ ಕೊಡಲು ಅವರು ಮನವಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

