ಮಸ್ಕಿ: ಭಾರತೀಯ ಜನತಾ ಪಾರ್ಟಿಯ ಎಸ್ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ನಾಯಕರನ್ನು ನೇಮಿಸಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಬಿ.ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಪಕ್ಷವನ್ನು ಗ್ರಾಮೀಣ ಮಟ್ಟದಲ್ಲಿ ಬಲಪಡಿಸುವ ಜತೆಗೆ ಗ್ರಾ.ಪಂ, ತಾ.ಪಂ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮುಲಕ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಡಗಬೇಕೆಂದು ತಿಳಿಸಿದ್ದಾರೆ.

