ದೇವರಸುಗೂರು, ಫೆ.20 :
ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ (NRLM) ಹಾಗೂ ಕೌಶಲ್ಯವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಯಾದ್ಲಾಪುರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ PRI–CBO ಸಮುದಾಯ ಆಧಾರಿತ ಒಗ್ಗೂಡಿಸುವಿಕೆ ಅಡಿಯಲ್ಲಿ VHSNC ತರಬೇತಿ ಕಾರ್ಯಕ್ರಮ, ಸಮನ್ವಯ ಮೇಳ ಹಾಗೂ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಶ್ರೀ ಬಸವರಾಜಪ್ಪಗೌಡ ಅವರು VHSNC ಕುರಿತು ತರಬೇತಿ ನೀಡಿದ್ದು, ಗ್ರಾಮ ಮಟ್ಟದಲ್ಲಿ ಆರೋಗ್ಯ, ಸ್ವಚ್ಛತೆ ಮತ್ತು ಪೌಷ್ಟಿಕತೆ ವಿಷಯಗಳಲ್ಲಿ ಸಮುದಾಯದ ಪಾತ್ರ ಅತ್ಯಂತ ಮಹತ್ವದ್ದೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ NRLM ತರಬೇತಿ ಕಾರ್ಯಕ್ರಮವೂ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಯಾದ್ಲಾಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಚೆನ್ನಮ್ಮ, ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, NRLM ಯಲ್ಲಪ್ಪ ಸರ್, IFC ಆಂಜಿನೇಯ್ಯ ಸರ್, BRP–PRI ಉರುಕುಂದಮ್ಮ, BRP–EP ಕವಿತಾ, MBK, LCRP, ಕೃಷಿ ಸಖಿ, ಪಶು ಸಖಿ, ವಿವಿಧ ಒಕ್ಕೂಟಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸ್ವಸಹಾಯ ಗುಂಪಿನ ಮಹಿಳೆಯರು ಭಾಗವಹಿಸಿದ್ದರು.
ಕಾರ್ಯಕ್ರಮವು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಹಾಗೂ ಸಮುದಾಯದ ಒಗ್ಗೂಡಿಸುವಿಕೆಯಲ್ಲಿ ಮಹತ್ವದ ಪಾತ್ರ ವಹಿಸಿತು.

