ಡಾ. ಅಯ್ಯನಗೌಡ ತಾಲೂಕ ಆರೋಗ್ಯ ಅಧಿಕಾರಿಗಳು ಸಿಂಧನೂರ್ ಇವರು ಇಂದು ಮಸ್ಕಿ ತಾಲೂಕಿನ ಬೆಳ್ಳಿಗನೂರ್ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಮನೆ ಮನೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಾಯಿತು ಹಾಗೂ ತುರ್ತು ಚಿಕಿತ್ಸಾ ಕೇಂದ್ರಗಳನ್ನು ಏರ್ಪಡಿಸಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಜೊತೆಗೆ ಆರೋಗ್ಯ ಶಿಕ್ಷಣ ಮಾಹಿತಿ ನೀಡಿ ನೀರಿನ ಮೂಲಗಳ ಪೈಪ್ ಲೈನ್ ದುರಸ್ತಿ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಯಿತು ಮತ್ತು ಗ್ರಾಮದ ಜನರಿಗೆ ನೀರನ್ನು ಕುದಿಸಿ ಆರಿಸಿ ಕುಡಿಯಲು ಮತ್ತು ಬಿಸಿಯಾದ ಆಹಾರ ಸೇವನೆ ಮಾಡುವುದು ಡಂಗುರ ಮೂಲಕ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಗೀತಾ ಹಿರೇಮಠ ನಿಖಿಲ್ ಹೊಸ್ಮನಿ ಆಂಜನೇಯ ಗುರುನಾಥ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *