ನಿನ್ನೆಯ ದಿನ ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿ ಸಿಂಧನೂರು ವತಿಯಿಂದ ಮಹಿಳೆಯರ ಜಾಗೃತಿ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವೇದಿಕೆ ಮೇಲಿರುವ ಗಣ್ಯರು ಮಾಲಾರ್ಪಣೆ ಮಾಡುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಸ್ತಾವಿಕವಾಗಿ ಸಮಿತಿಯ ಜಿಲ್ಲಾ ಸಂಚಾಲಕ ಮೌನೇಶ್ ಮೌನೇಶ ಜಾಲವಾಡಗಿ ಮಾತನಾಡಿ ದಲಿತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಯುವಜನರ ಹಕ್ಕುಗಳನ್ನು ಅವರಿಗೆ ಪ್ರಾಮಾಣಿಕವಾಗಿ ಕೊಡಿಸುವ ನಿಟ್ಟಿನಲ್ಲಿ ನಿರಂತರ ಶ್ರಮಿಸುತ್ತಿದೆ ಜೊತೆಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಸಾಮಾಜಿಕ ಜೀವನದಲ್ಲಿ ಅವರಿಗೆ ಎದುರಾಗುವ ಸವಾಲುಗಳು ಮತ್ತು ಸಂಕಷ್ಟಗಳ ವಿರುದ್ಧ ಹೋರಾಡಲು ಹಾಗೂ ಜಾಗೃತಗೊಳ್ಳಲು ಇಂತಹ ಕಾರ್ಯಕ್ರಮವನ್ನು ನಾವು ನಡೆಸುತ್ತಾ ಬಂದಿದ್ದೇವೆ ಎಂದರು.

ನಂತರ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಲಿಂಗನಗೌಡ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಿಂಧನೂರು ಇವರು ಮಾತನಾಡಿ ವಿದ್ಯಾರ್ಥಿನಿಯರು ಶಿಕ್ಷಣಕ್ಕೆ ಮೊದಲ ಪ್ರಶಸ್ತಿ ನೀಡಿ ಬಾಬಾ ಸಾಹೇಬರ ಹಣತೆಯಂತೆ ಶಿಕ್ಷಣ ಎನ್ನುವುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಗರ್ಜಿಸಲೇಬೇಕು.
ಹಾಗಾಗಿ ಶಿಕ್ಷಣದಿಂದ ನಿಮ್ಮ ಜೀವನವನ್ನು ರೂಪಿಸಿಕೊಳ್ಳುವುದರ ಜೊತೆಗೆ ವಿಶೇಷವಾಗಿ ಮಹಿಳೆಯರು ಸಾಮಾಜಿಕ, ಶೈಕ್ಷಣಿಕ ಬದುಕಿನಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು, ಮತ್ತು ಮಹಿಳೆಯರ ಮೇಲೆ ನಡೆಯುವ ಹಲವಾರು ದೌರ್ಜನ್ಯಗಳನ್ನು ಮೆಟ್ಟಲು ಅವರಿಗೆ ಸರ್ಕಾರದ ವತಿಯಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನದಲ್ಲಿದ್ದು ಅವುಗಳ ಬಗ್ಗೆ ಅರಿವನ್ನು ಹೊಂದಿರಬೇಕು, ವಿದ್ಯಾರ್ಥಿನಿಯರು ಮಾನಸಿಕವಾಗಿ ಗಟ್ಟಿಯಾಗಿರಬೇಕು, ಮಹಿಳೆಯರಿಗೆ ನಮ್ಮ ಇಲಾಖೆಯಿಂದ ಒದಗಿಸುವ ಸೌಕರ್ಯಗಳನ್ನು ತಾವೆಲ್ಲರೂ ಪಡೆದುಕೊಂಡು ಉತ್ತಮ ಜೀವನವನ್ನು ಮುನ್ನಡೆಸಬೇಕೆಂದು ಎಂದರು.

ನಂತರದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗೀತಾ ಹಿರೇಮಠ ಅವರು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.
ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಶರಣಪ್ಪ ಗೋನಾಳ ಮಾತನಾಡಿದರು.

ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ್ ಅಧ್ಯಕ್ಷರಾದ ದುರ್ಗೇಶ ಕಲ್ಮಂಗಿ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ನರಸಪ್ಪ ಬಡಿಗೇರ್ ಸ್ವಾಗತ ಕೋರಿದರು.

ಮತ್ತು ಈ ಸಂದರ್ಭದಲ್ಲಿ ತುರ್ವಿಹಾಳ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಅಶೋಕ, ಸಿಂಧನೂರು ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಅಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ್, ಪತ್ರಕರ್ತರಾದ ಶ್ರೀ ವೀರೇಶ್ ಗಡ್ಡಿಮಾಳ ಹಾಗೂ ವಸತಿ ನಿಲಯದ ಸಿಬ್ಬಂದಿಗಳು ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *